ಕರ್ನಾಟಕ ಸರ್ಕಾರ ಜಿಲ್ಲಾಡಳಿತ ಪ್ರವಾಸೋದ್ಯಮ ಇಲಾಖೆ ಹಾಗೂ ಬಿ ಎಲ್ ಡಿ ಇ ಸಂಸ್ಥೆಯ ಶ್ರೀಮತಿ ಬಂಗಾರಮ್ಮ ಸಜ್ಜನ್ ಕಲಾ ವಾಣಿಜ್ಯ ಮತ್ತು ವಿಜ್ಞಾನ ಮಹಿಳಾ ಮಹಾವಿದ್ಯಾಲಯ ವಿಜಯಪುರ ಸಹಯೋಗದಲ್ಲಿ ಇತಿಹಾಸ ವಿಭಾಗವು ವಿಜಯಪುರದ ಪ್ರಸಿದ್ಧ ಪ್ರವಾಸಿ ತಾಣವಾದ ಗೋಳಗುಮ್ಮಟದ ಆವರಣದಲ್ಲಿ ವಿಶ್ವ ಪ್ರವಾಸೋದ್ಯಮ ದಿನವನ್ನು ದಿನಾಂಕ 27 9 2024 ರಂದು ಆಚರಿಸಲಾಯಿತು ಈ ಕಾರ್ಯಕ್ರಮಕ್ಕೆ ಕರ್ನಾಟಕ ಬಾಲ ವಿಕಾಸ ಅಕಾಡೆಮಿಯ ಅಧ್ಯಕ್ಷರಾದ ಶ್ರೀ ಸಂಗಮೇಶ್ ಬಬಲೇಶ್ವರವರು ಉದ್ಘಾಟಕರಾಗಿ ಆಗಮಿಸಿದ್ದರು. ಮುಖ್ಯ ಅತಿಥಿಗಳಾಗಿ ವಿಜಯಪುರ ಮಹಾನಗರ ಪಾಲಿಕೆಯ ಪೂಜ್ಯ ಮಹಾಪೌರರಾದ ಶ್ರೀಮತಿ ಮಹಾ ಜುಬಿನ್ ಹೊರ್ತಿ ವಿಜಯಪುರ ಅಪರ ಜಿಲ್ಲಾಧಿಕಾರಿಗಳಾದ ಗೆಣ್ಣುರ್ ಸರ್ ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕರಾದ ಮಲ್ಲಿಕಾರ್ಜುನ್ ಭಜಂತ್ರಿ ಹಾಗೂ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ.ವೈ ತಮ್ಮಣ್ಣ ಉಪಸ್ಥಿತರಿದ್ದರು ಕಾರ್ಯಕ್ರಮದಲ್ಲಿ ಸುಮಾರು ಮಹಾವಿದ್ಯಾಲಯದ 120 ಜನ ವಿದ್ಯಾರ್ಥಿನಿಯರು ಹತ್ತು ಜನ ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು.