ಬಿ. ಎಲ್. ಡಿ. ಇ ಸಂಸ್ಥೆಯ ಶ್ರೀಮತಿ. ಬಂಗಾರಮ್ಮ ಸಜ್ಜನ ಕಲಾ ವಾಣಿಜ್ಯ ಹಾಗೂ ವಿಜ್ಞಾನ ಮಹಿಳಾ ಮಹಾವಿದ್ಯಾಲಯ ವಿಜಯಪುರ ಐಕ್ಯೂಎ ಸಿ ಅಡಿಯಲ್ಲಿ ರಾಜ್ಯಶಾಸ್ತ್ರ ವಿಭಾಗದ ಸಹಯೋಗದಲ್ಲಿ ರಾಷ್ಟ್ರೀಯ ಸಂವಿಧಾನ ದಿನಾಚರಣೆಯ ಪ್ರಯುಕ್ತ ದಿನಾಂಕ 25.11.2024ರಂದು ಮಹಾವಿದ್ಯಾಲಯದ ಸಭಾಭವನದಲ್ಲಿ ಚರ್ಚಾ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಒಟ್ಟು 6 ತಂಡಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದವು 6 ತಂಡಗಳ ಪೈಕಿ ಎರಡು ತಂಡಗಳು ಪ್ರಥಮ ಮತ್ತು ದ್ವಿತೀಯ ಬಹುಮಾನವನ್ನು ಪಡೆದುಕೊಂಡಿರುತ್ತಾರೆ. ದಿನಾಂಕ 26.11.2024ರಂದು ಬೆಳಗ್ಗೆ 10 ಗಂಟೆಗೆ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಮಹಾವಿದ್ಯಾಲಯದ ಆವರಣದಿಂದ ಶ್ರೀ ಸಿದ್ದೇಶ್ವರ ದೇವಸ್ಥಾನದವರೆಗೆ ಜಾಥಾ ಕಾರ್ಯಕ್ರಮವನ್ನು ಕೈಗೊಳ್ಳಲಾಯಿತು. ಅದೇ ರೀತಿಯಾಗಿ ಬೆಳಗ್ಗೆ 11:30 ಗಂಟೆಗೆ ರಾಷ್ಟ್ರೀಯ ಸಂವಿಧಾನ ದಿನವನ್ನು ಆಚರಿಸಲಾಯಿತು ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆಸಲ್ಲಿಸುವ ಮೂಲಕ ಸಂವಿಧಾನ ದಿನಾಚರಣೆಯನ್ನು ಆಚರಿಸಲಾಯಿತು. ತದನಂತರ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಪ್ರೊ. ರೇಖಾ ಗಡಗಿರವರು ಸಂವಿಧಾನದ ಪೂರ್ವ ಪೀಠಿಕೆಯನ್ನು ವಾಚನ ಮಾಡಿಸಿದರು. ತದನಂತರ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಡಾ. ಬಂದೆ ನವಾಜ್ ಕೊರಬು ಸಹ ಪ್ರಾಧ್ಯಾಪಕರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿಜಯಪುರ ರವರು ಮಾತನಾಡಿ ಸಂವಿಧಾನದ ಮೌಲ್ಯಗಳು ಕುರಿತು ಸಂವಿಧಾನ ಪ್ರಸ್ತಾವನೆಯ ಅಂಶಗಳನ್ನು ಸವಿಸ್ತಾರವಾಗಿ ವಿದ್ಯಾರ್ಥಿಗಳಿಗೆ ಮನನ ಮಾಡಿಸಿದರು. ಕಾರ್ಯಕ್ರಮದ ಅಧ್ಯಕ್ಷಿಯ ಸ್ಥಾನವಹಿಸಿದ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ. ವೈ ತಮ್ಮಣ್ಣ ರವರು ಅಂಬೇಡ್ಕರ್ ಅವರ ಕಾರ್ಯಸಾಧನೆಯ ಕುರಿತು ಮಾತನಾಡುತ್ತಾ ಅಂಬೇಡ್ಕರರು ಒಂದು ಜನಾಂಗದ ಶಕ್ತಿ ಅಲ್ಲದೆ ಒಂದು ದೇಶದ ಶಕ್ತಿಯಾಗಿದ್ದಾರೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಐಕ್ಯೂಏಸಿ ಸಂಯೋಜಕರಾದ ಡಾ. ಭಕ್ತಿ ಮಹೇಂದ್ರಕರ್ ಉಪಸ್ಥಿತತರಿದ್ದರು ಹಾಗೂ ಹಿರಿಯ ಉಪನ್ಯಾಸಕರಾದ ಡಾ. ಎ.ಟಿ.ಶ್ರೀನಿವಾಸ್ ಮುಖ್ಯಸ್ಥರು ಸಂಖ್ಯಾಶಾಸ್ತ್ರ ವಿಭಾಗ ಹಾಗೂ ಮಹಾವಿದ್ಯಾಲಯದ 25 ಜನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗ ಮತ್ತು 190 ಜನ ವಿದ್ಯಾರ್ಥಿನಿಯರು ಕಾರ್ಯಕ್ರಮದಲ್ಲಿ ಹಾಜರಿದ್ದರು.